ಮಂಗಳೂರು : ನಗರದ ಶಾರದಾ ಪದವಿ ಪೂರ್ವ ಕಾಲೇಜಿನ 2015-16 ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗಳ ಪ್ರಾರಂಭೋತ್ಸವವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಂತ ಎಲೋಶಿಯಸ್ ಕಾಲೇಜಿನ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾದ ರೊನಾಲ್ಡ್ ಪಿಂಟೊ ಅವರು ಪಿ.ಯು.ಸಿ. ಯಲ್ಲಿ ವಾಣಿಜ್ಯ ಮತ್ತು ವಿಜ್ಞಾನವನ್ನು ಕಲಿಯುವ ವಿದ್ಯಾರ್ಥಿಗಳಿಗೆ ಮುಂದೆ ಪಡೆಯಬಹುದಾದ ವಿವಿಧ ರೀತಿಯ ಪದವಿ ಮತ್ತು ಉದ್ಯೋಗಾವಕಾಶಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಖ್ಯಾತ ಪತ್ರಕರ್ತ ಶ್ರೀ ಎಸ್. ನಂದಗೋಪಾಲ್ ಅವರು ಪಿ.ಯು.ಸಿ ಅವಧಿಯ ಎರಡು ವರ್ಷಗಳನ್ನು ಹೇಗೆ ಪರಿಣಾಮಕಾರಿಯಾಗಿ ಕಲಿಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಬಳಸಿಕೊಳ್ಳಬಹುದು ಎಂಬುದನ್ನು ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ವಿವರಿಸಿ ಹೇಳಿದರು. ಇನ್ನೊರ್ವ ಅತಿಥಿ ಶ್ರೀಮತಿ ಸಚಿತ ನಂದಗೋಪಾಲ್ ಅವರು ಉತ್ತಮ ಚಾರಿತ್ರ್ಯ ಮತ್ತು ನೈತಿಕ ಮೌಲ್ಯಗಳ ಮಹತ್ವದ ಕುರಿತು ವಿವರಿಸಿದರು.
ಕಾರ್ಯಕ್ರಮದ ಮೊದಲಿಗೆ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಪತಿ ರಾವ್ ಅವರು ಸ್ವಾಗತಿಸಿ ಕೊನೆಯಲ್ಲಿ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮಾಧವಿ ಅವರು ವಂದನಾರ್ಪಣೆಗೈದರು. ವಾಣಿಜ್ಯಶಾಸ್ತ್ರ ವಿಭಾಗದ ಶ್ರೀಮತಿ ಶಾಲಿನಿ ಕುಂಬಳೆ ಅವರು ಕಾರ್ಯಕ್ರಮ ನಿರ್ವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.