ನವದೆಹಲಿ: ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದು ಎಂಬ ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್ಗೆ ಸೋಮವಾರ ಮರುಪರಿಶೀಲನಾ ಅರ್ಜಿಯನ್ನು ಹಾಕಲಾಗಿದೆ.
ರಾಷ್ಟ್ರೀಯ ಅಯ್ಯಪ್ಪ ಭಕ್ತ ಅಸೋಸಿಯೇಶನ್ ಈ ಮರುಪರಿಶೀಲನಾ ಅರ್ಜಿಯನ್ನು ಹಾಕಿದೆ.
ಸೆ.28ರಂದು ಐವರು ನ್ಯಾಯಧೀಶರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠ, ಎಲ್ಲಾ ವಯಸ್ಸಿನ ಮಹಿಳೆಯರೂ ಶಬರಿಮಲೆಗೆ ಪ್ರವೇಶಿಸಬಹುದು ಎಂಬ ತೀರ್ಪನ್ನು ನೀಡಿತ್ತು. ಈ ತೀರ್ಪು ದೇಶದಾದ್ಯಂತದ ಅಯ್ಯಪ್ಪ ಭಕ್ತರ ವಿರೋಧಕ್ಕೆ ಕಾರಣವಾಗಿತ್ತು.
ಕೇರಳದಲ್ಲೂ ಮಹಿಳೆಯರು ಸೇರಿದಂತೆ ಅಪಾರ ಭಕ್ತರು ಬೀದಿಗಿಳಿದು ಸುಪ್ರೀಂ ತೀರ್ಪಿನ ವಿರುದ್ಧ ಧ್ವನಿಯೆತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.