ರಾಯ್ಪುರ; ಛತ್ತೀಸ್ಗಢದಲ್ಲಿ ಕೆಂಪು ಉಗ್ರರ ದಮನ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಸೋಮವಾರ 16 ನಕ್ಸಲರನ್ನು ಬಂಧಿಸಲಾಗಿದ್ದು, ಇದರಲ್ಲಿ 5 ನಕ್ಸಲರು ಕಳೆದ ವರ್ಷದ ಸಿಆರ್ಪಿಎಫ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಸುಕ್ಮಾ ಜಿಲ್ಲೆಯ ನಿನ್ಪಾ ಗ್ರಾಮದ ಚಿಂಟಗುಫಾ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿ ಸ್ಪೆಷಲ್ ಟಾಸ್ಕ್ ಫೋರ್ಸ್ ಮತ್ತು ಜಿಲ್ಲಾ ಮೀಸಲು ಪಡೆ ಜಂಟಿ ಕಾರ್ಯಾಚರಣೆಯನ್ನು ನಡೆಸಿ ಈ ಕೆಂಪು ಉಗ್ರರನ್ನು ಬಂಧಿಸಿದೆ.
ಬಂಧಿತ 16 ಮಂದಿ ನಕ್ಸಲರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ತಿಂಗಳು ಛತ್ತೀಸ್ಗಢದಲ್ಲಿ ವಿಧಾನಸಭಾ ಚುನಾವಣೆ ಜರುಗಲಿದ್ದು, ಈ ಹಿನ್ನಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಇನ್ನಷ್ಟು ಚುರುಕುಗೊಳಿಸಿವೆ.
source; Indianexpress
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.