ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರು ಬುಧವಾರ ಮುಂಜಾನೆ ಚಾಲನೆಯನ್ನು ನೀಡಿದ್ದಾರೆ. ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಇನ್ಫೋಸಿಸ್ ಸಂಸ್ಥಾಪಕ ನಾರಯಣಮೂರ್ತಿ ಜೊತೆಗೂಡಿ ನಾಡದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಸುಧಾಮೂರ್ತಿ ಮತ್ತು ಅವರ ಕುಟುಂಬದವರು ದೇವಿಗೆ ಬಾಗಿನ ಸಮರ್ಪಣೆ ಮಾಡಿದರು.
ಮುಖ್ಯಮಂತ್ರಿಗಳು ಸುಧಾಮೂರ್ತಿಯವರಿಗೆ ಮೈಸೂರು ಪೇಟಾವನ್ನು ತೊಡಿಸಿ ಗೌರವ ಸಮರ್ಪಣೆ ಮಾಡಿದರು. ಮೈಸೂರು ಜಿಲ್ಲಾ ಉಸ್ತುವಾರಿ ಜಿಟಿ ದೇವೇಗೌಡ, ಸಂಸ್ಕೃತಿ ಸಚಿವೆ ಜಯಮಾಲಾ, ಕೊಡಗು ಜಿಲ್ಲಾ ಉಸ್ತುವಾರಿ ಸಾ.ರಾ.ಮಹೇಶ್, ಸಂಸದ ಪ್ರತಾಪ್ ಸಿಂಹ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅರಮನೆಯಲ್ಲೂ ಖಾಸಗಿ ದರ್ಬಾರ್ಗೆ ಚಾಲನೆ ದೊರೆತಿದೆ. ಪೂಜಾ ವಿಧಿವಿಧಾನಗಳು ಬೆಳಿಗ್ಗೆ 5.30ಕ್ಕೆಯೇ ಆರಂಭಗೊಂಡಿದೆ. ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಕಂಕಣ ಕಟ್ಟಲಾಗಿದೆ.
ಇನ್ನು ಹತ್ತು ದಿನಗಳ ಕಾಲ ದಸರಾ ಪ್ರಯುಕ್ತ ಮೈಸೂರಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಕೊನೆ ದಿನ ಜಂಬೂ ಸವಾರಿ ಜರುಗಲಿದೆ. ಇದನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳ ನೂರಾರು ಮಂದಿ ಆಗಮಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.