ತಿರುವನಂಪತಪುರಂ: ಸುಪ್ರೀಂಕೋರ್ಟ್ನ ಆದೇಶದಂತೆ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ ಕೇರಳ ಸರ್ಕಾರ ಪರಿಹಾರವಾಗಿ ರೂ.50 ಲಕ್ಷಗಳ ಚೆಕ್ನ್ನು ಹಸ್ತಾಂತರ ಮಾಡಿದೆ.
ಸ್ವತಃ ಕೇರಳ ಸಿಎಂ ಪಿನರಾಯಿ ವಿಜಯನ್ ಅವರೇ ನಂಬಿ ರಾಯಣ್ ಅವರನ್ನು ಭೇಟಿಯಾಗಿ ಚೆಕ್ ಹಸ್ತಾಂತರ ಮಾಡಿದ್ದಾರೆ.
ಭಾರತದ ಮಹತ್ವದ ಬಾಹ್ಯಾಕಾಶ ತಂತ್ರಜ್ಞಾನಗಳನ್ನು ಪಾಕಿಸ್ಥಾನಕ್ಕೆ ಸೋರಿಕೆ ಮಾಡಿದ್ದಾರೆ ಎಂಬ ಆರೋಪ ಹೊರಿಸಿ ನಂಬಿ ನಾರಾಯಣ್ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು, ಬಳಿಕ ಅವರು ಎಲ್ಲಾ ಆರೋಪಗಳಿಂದ ಮುಕ್ತರಾಗಿ ಹೊರಬಂದಿದ್ದರು.
ಈ ಪ್ರಕರಣದಲ್ಲಿ ನಂಬಿ ನಾರಾಯಣ್ ಅವರ ಬಂಧನ ಅನಗತ್ಯವಾಗಿತ್ತು ಎಂದು ಪ್ರತಿಪಾದಿಸಿರುವ ಸುಪ್ರೀಂ, ವರಿಗೆ ರೂ.50 ಲಕ್ಷಗಳ ಪರಿಹಾರ ನೀಡುವಂತೆ ಘೋಷಣೆ ಮಾಡಿತ್ತು. ಅದರಂತೆ ಇಂದು ಕೇರಳ ಸಿಎಂ ಅವರಿಗೆ ಪರಿಹಾರ ವಿತರಿಸಿದ್ದಾರೆ.
source; ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.