ನವದೆಹಲಿ: ಭಾರತೀಯ ಚಿತ್ರರಂಗದಲ್ಲಿ #MeToo ಅಭಿಯಾನ ಭಾರೀ ಸದ್ದು ಮಾಡುತ್ತಿದೆ, ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಪುರುಷರ ಬಂಡವಾಳ ಒಂದೊಂದಾಗಿಯೇ ಹೊರ ಬರುತ್ತಿದೆ. ಈಗಾಗಲೇ ದೊಡ್ಡ ದೊಡ್ಡ ನಟರು, ನಿರ್ಮಾಪಕರ ಹೆಸರು ಲೈಂಗಿಕ ದೌರ್ಜನ್ಯದಲ್ಲಿ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಮುಂದಾಗಿದ್ದಾರೆ.
#MeToo ಅಭಿಯಾನದಡಿ ಹೊರ ಬಂದಿರುವ ಲೈಂಗಿಕ ದೌರ್ಜನ್ಯದ ಹಗರಣಗಳ ಬಗ್ಗೆ ಸಾರ್ವಜನಿಕವಾಗಿ ತನಿಖೆ ನಡೆಸಲು ನಾಲ್ಕು ನಿವೃತ್ತ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ರಚನೆ ಮಾಡುವುದಾಗಿ ಅವರು ಶುಕ್ರವಾರ ಘೋಷಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೇನಕಾ, ‘#MeToo ಅಭಿಯಾನದಲ್ಲಿ ಕೇಳಿ ಬಂದಿರುವ ಲೈಂಗಿಕ ಅಪರಾಧಗಳ ಬಗ್ಗೆ ತನಿಖೆ ನಡೆಸಲು ಹಿರಿಯ ನ್ಯಾಯಾಧೀಶರ, ಕಾನೂನು ವ್ಯಕ್ತಿಗಳ ಸಮಿತಿಯನ್ನು ರಚನೆ ಮಾಡಲು ಪ್ರಸ್ತಾಪಿಸುತ್ತಿದ್ದೇನೆ’ ಎಂದಿದ್ದಾರೆ.
ಚಿತ್ರರಂಗದ, ಕ್ರೀಡಾವಲಯದ ಹಲವಾರು ಮಹಿಳೆಯರು #MeToo ಅಭಿಯಾನದಡಿ ತಮಗೆ ಲೈಂಗಿಕ ದೌರ್ಜನ್ಯ ನೀಡಿದವರ ಹೆಸರನ್ನು ಬಹಿರಂಗಪಡಿಸುತ್ತಿದ್ದಾರೆ.
source; zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.