ನವದೆಹಲಿ: ಐಪಿಎಲ್ನ ಮಾಜಿ ಮುಖ್ಯಸ್ಥ ಮತ್ತು ಹಗರಣಗಳ ಆರೋಪಕ್ಕೆ ಗುರಿಯಾಗಿರುವ ಲಲಿತ್ ಮೋದಿಯವರಿಗೆ ವೀಸಾ ಪಡೆಯಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ವಿವಾದವನ್ನೇ ಸೃಷ್ಟಿಸಿದೆ.
ಕಾಂಗ್ರೆಸ್ ಸೇರಿದಂತೆ ಬಹುತೇಕ ಪ್ರತಿಪಕ್ಷಗಳು ಸುಷ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿವೆ. ಸಮಾಜವಾದಿ ಪಕ್ಷ ಮಾತ್ರ ಈ ವಿಷಯದಲ್ಲಿ ಸುಮ್ಮನಾಗಿದೆ.
ಆದರೆ ಸುಷ್ಮಾ ಬೆನ್ನಿಗೆ ನಿಂತಿರುವ ಬಿಜೆಪಿ, ಈ ವಿಷಯದಲ್ಲಿ ಸಚಿವೆ ಯಾವ ತಪ್ಪನ್ನೂ ಮಾಡಿಲ್ಲ. ಮಾನವೀಯತೆಯ ಆಧಾರದಲ್ಲಿ ವೀಸಾ ನೀಡಿದ್ದಾರೆ ಎಂದು ಪ್ರತಿಪಾದಿಸಿದೆ.
‘ಮೋದಿಯವರ ಪತ್ನಿ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಅವರಿಗೆ ಪೋರ್ಚುಗಲ್ನಲ್ಲಿ ಚಿಕಿತ್ಸೆ ನೀಡಲು ಸಹಾಯವಾಗುವಂತೆ ವೀಸಾವನ್ನು ಬ್ರಿಟನ್ ಕಾನೂನು ವ್ಯಾಪ್ತಿಯಲ್ಲಿ ನೀಡುವಂತೆ ಕೋರಿದ್ದೆ’ ಎಂದು ಸುಷ್ಮಾ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಈ ವಿಷಯ ಬಹಿರಂಗವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹಿರಿಯ ಸಚಿವರೊಂದಿಗೆ ತುರ್ತು ಸಭೆಯನ್ನು ನಡೆಸಿದ್ದಾರೆ ಮತ್ತು ಸುಷ್ಮಾ ಅವರಿಂದ ವಿವರಣೆಯನ್ನೂ ಪಡೆದುಕೊಂಡಿದ್ದಾರೆ.
ಅದೇನೆಯಿರಲಿ ಈ ವಿಷಯ ಪ್ರತಿಪಕ್ಷಗಳಿಗೆ ಕೇಂದ್ರ ಸರ್ಕಾರವನ್ನು ಹಳಿಯಲು ಬ್ರಹ್ಮಾಸ್ತ್ರ ಸಿಕ್ಕಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.