ರಾಷ್ಟ್ರೀಯ ಪೊಲೀಸ್ ಸ್ಮರಣಾರ್ಥ ದಿನವಾದ ಭಾನುವಾರ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಿರ್ಮಾಣಗೊಂಡಿರುವ ‘ರಾಷ್ಟ್ರೀಯ ಪೊಲೀಸ್ ಸ್ಮಾರಕ’ವನ್ನು ಲೋಕಾರ್ಪಣೆಗೊಳಿಸಿದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ನವದೆಹಲಿಯಲ್ಲಿ ‘ರಾಷ್ಟ್ರೀಯ ಪೊಲೀಸ್ ಸ್ಮಾರಕ’ವನ್ನು ಉದ್ಘಾಟನೆಗೊಳಿಸಿದರು. ಕಳೆದ ಒಂದು ದಶಕಗಳಿಂದ ಇದರ ನಿರ್ಮಾಣ ಕಾರ್ಯ ನಡೆಯುತ್ತಿತ್ತು.
ದೇಶದ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮ ಪ್ರಾಣವನ್ನು ಬಲಿಕೊಟ್ಟು ಹುತಾತ್ಮರಾಗಿರುವ ಪೊಲೀಸರ ಗೌರವಾರ್ಥ ಈ ಸ್ಮಾರಕ ನಿರ್ಮಾಣಗೊಂಡಿದೆ.
ವಿಶೇಷವೆಂದರೆ, ಮೂರು ಪಡೆಗಳ ನಿವೃತ್ತ ಸೈನಿಕರ ಮಹತ್ವದ ಬೇಡಿಕೆಯಾದ, ಹುತಾತ್ಮ ಯೋಧರಿಗೆ ಗೌರವವಾರ್ಥವಾಗಿ ನಿರ್ಮಾಣವಾಗುತ್ತಿರುವ ‘ರಾಷ್ಟ್ರೀಯ ಯುದ್ಧ ಸ್ಮಾರಕ’ದ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಜಮ್ಮು ಕಾಶ್ಮೀರ, ಮಾವೋವಾದಿ ಏರಿಯಾಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಪೊಲೀಸರ ಕಾರ್ಯವನ್ನು ಕೊಂಡಾಡಿದರು. ಶಾಂತಿ ಮತ್ತು ನೆಲದ ಕಾನೂನು ನಿಮ್ಮ ಪರಿಶ್ರಮದ ಫಲ ಎಂದು ಬಣ್ಣಿಸಿದರು.
ಪ್ರತಿ ವರ್ಷ ಅ.21ರಂದು ರಾಷ್ಟ್ರೀಯ ಪೊಲೀಸ್ ಸ್ಮರಣೆ ದಿನವನ್ನು ಆಚರಿಸಲಾಗುತ್ತದೆ. 1959ರಲ್ಲಿ ಲಡಾಖ್ನಲ್ಲಿ ಚೀನಿ ಪಡೆಗಳಿಂದ ಹತ್ಯೆಗೀಡಾದ 10 ಪೊಲೀಸರ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ.
source; Hindustantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.