ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಬಜರಂಗ್ ಪೂನಿಯಾ ಅವರು ಬೆಳ್ಳಿ ಸಾಧನೆ ಮಾಡಿದ್ದಾರೆ. 2013ರಲ್ಲಿ ಅವರು ಕಂಚು ಗೆದ್ದಿದ್ದು, ಕುಸ್ತಿ ಚಾಂಪಿಯನ್ಶಿಪ್ಗಳಲ್ಲಿ 2 ಪದಕ ಗೆದ್ದ ಎಕೈಕ ಭಾರತೀಯ ಎನಿಸಿಕೊಂಡಿದ್ದಾರೆ.
ನವದೆಹಲಿ: ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ.
65 ಕೆಜಿ ಫ್ರೀಸ್ಟೈಲ್ ವಿಭಾಗದ ಫೈನಲ್ ಪಂದ್ಯದಲ್ಲಿ ಪೂನಿಯಾ ಅವರು ಜಪಾನ್ ಆಟಗಾರನ ವಿರುದ್ಧ 9-16 ಅಂತರದಿಂದ ಸೋಲು ಕಂಡು ಬೆಳ್ಳಿ ಜಯಿಸಿದರು. ಸೆಮಿಫೈನಲ್ನಲ್ಲಿ ಕ್ಯೂಬಾದ ಆಟಗಾರನನ್ನು 4-3 ಅಂತರದಿಂದ ಸೋಲಿಸಿ ಇವರು ಫೈನಲ್ ಪ್ರವೇಶಿಸಿದ್ದರು.
ಪೂನಿಯಾ ಅವರು 2013ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕವನ್ನು ಜಯಿಸಿದ್ದರು, ಈ ಬಾರಿ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಎರಡು ಪದಕ ಗೆದ್ದ ಏಕೈಕ ಭಾರತೀಯ ಎಂಬ ಕೀರ್ತಿಗೆ ಬಾಜನರಾಗಿದ್ದಾರೆ.
source; Dailyhunt
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.