ಛತ್ತೀಸ್ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿ 40 ಸ್ಟಾರ್ ಪ್ರಚಾರಕರನ್ನು ಆಯ್ಕೆ ಮಾಡಿದೆ. 6 ಸಿಎಂಗಳು, ಪ್ರಧಾನಿ, ಅಮಿತ್ ಶಾ ಪಟ್ಟಿಯಲ್ಲಿದ್ದಾರೆ. ರಾಜ್ಯದ ಅವಶ್ಯಕತೆಗೆ ಅನುಗುಣವಾಗಿ ಪ್ರಭಾವ ಬೀರುವ ಸ್ಟಾರ್ ಪ್ರಚಾರಕರನ್ನು ಆಯ್ಕೆ ಮಾಡಲಾಗಿದೆ.
ನವದೆಹಲಿ: ಛತ್ತೀಸ್ಗಢದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಈಗಾಗಲೇ 40 ತಾರಾ ಪ್ರಚಾರಕರನ್ನು ಘೋಷಣೆ ಮಾಡಿದೆ.
ತಾರಾ ಪ್ರಚಾರಕರ ಪಟ್ಟಿಯಲ್ಲಿ 12 ಕೇಂದ್ರ ಸಚಿವರು, 6 ಮುಖ್ಯಮಂತ್ರಿಗಳು, ಪ್ರಧಾನ ಮಂತ್ರಿ, ಬಿಜೆಪಿ ರಾಷ್ಟ್ರಾಧ್ಯಕ್ಷರು ಇದ್ದಾರೆ. ಪಕ್ಷದ ಇಬ್ಬರು ಪ್ರಧಾನ ಕಾರ್ಯದರ್ಶಿಗಳು ಕೂಡ ಈ ಪಟ್ಟಿಯಲ್ಲಿದ್ದಾರೆ. ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸೌಧನ್ ಸಿಂಗ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಪವಣ್ ಸಾಯಿ ಅವರು ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿದೆ.
ಬುಡಕಟ್ಟು ಸಮುದಾಯದ ಮೇಲೆ ಪ್ರಭಾವ ಬೀರುವುದು ಸೇರಿದಂತೆ ಛತ್ತೀಸ್ಗಢದ ಇತರ ಅವಶ್ಯಕತೆಗಳಿಗೆ ಅನುಗುಣವಾಗಿ ತಾರಾ ಪ್ರಚಾರಕರನ್ನು ಆಯ್ಕೆ ಮಾಡಲಾಗಿದೆ. ಬೋಜ್ಪುರಿ ಮಾತನಾಡುವವರೂ ಇಲ್ಲಿ ಅಧಿಕ ಪ್ರಮಾಣದಲ್ಲಿ ಇರುವುದರಿಂದ ಮನೋಜ್ ತಿವಾರಿಯವರನ್ನು ತಾರ ಪ್ರಚಾರಕರನ್ನಾಗಿ ಆಯ್ಕೆ ಮಾಡಲಾಗಿದೆ. ಉಳಿದಂತೆ ಹೇಮಾಮಾಲಿನಿ, ಸ್ಮೃತಿ ಇರಾನಿ ಮುಂತಾದವರು ಪಟ್ಟಿಯಲ್ಲಿದ್ದಾರೆ.
ಕೇಂದ್ರ ಬುಡಕಟ್ಟು ಅಭಿವೃದ್ಧಿ ಸಚಿವ ಜ್ಯುವೆಲ್ ಒರಮ್, ಮಾಜಿ ಜಾರ್ಖಾಂಡ್ ಸಿಎಂ ಅರ್ಜುನ್ ಮುಂಡ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಮುಂತಾದರು ಪಟ್ಟಿಯಲ್ಲಿದ್ದಾರೆ.
source; dailyhunt
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.