ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಕೇವಲ ಹಸಿರು, ಪರಿಸರ ಸ್ನೇಹಿ, ಅನುಮತಿಯಷ್ಟು ಶಬ್ದವನ್ನೊಳಗೊಂಡ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದಿದೆ.
ನವದೆಹಲಿ: ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧವನ್ನು ಹೇರಲು ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಕೇವಲ ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಮಾರುಕಟ್ಟೆಯಲ್ಲಿ ಮಾರಟಕ್ಕೆ ಇಡಬೇಕು ಎಂದು ಸೂಚನೆ ನೀಡಿದೆ.
ಅನುಮತಿ ಇರುವಷ್ಟು ಶಬ್ದದ ಮಿತಿಯನ್ನು ಒಳಗೊಂಡ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಕೇವಲ ಪರವಾನಗಿ ಹೊಂದಿದ ವ್ಯಾಪಾರಿಗಳು ಮಾತ್ರ ಸುರಕ್ಷಿತ ಪಟಾಕಿಗಳನ್ನು ಮಾರಾಟ ಮಾಡಬೇಕು ಎಂದು ನ್ಯಾಯಧೀಶ ಅರ್ಜುನ್ ಕುಮಾರ್ ಸಿಕ್ರಿ ಹೇಳಿದ್ದಾರೆ. ಅಲ್ಲದೇ ಪಟಾಕಿಗಳ ಆನ್ಲೈನ್ ಮಾರಾಟಕ್ಕೆ ನಿಷೇಧ ವಿಧಿಸಿದ್ದಾರೆ.
ಪಟಾಕಿಗಳನ್ನು ನಿಷೇಧಿಸುವಂತೆ ಕೋರಿ ಬಂದ ಹಲವಾರು ಅರ್ಜಿಗಳನ್ನು ವಿಚಾರಣೆಗೊಳಪಡಿಸಿ ಈ ಆದೇಶವನ್ನು ನೀಡಲಾಗಿದೆ.
source; Zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.