ನವದೆಹಲಿ: ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(ಐಐಎಂ)ಗಳು ಶೀಘ್ರದಲ್ಲೇ ಪಿಹೆಚ್ಡಿಗಳಿಗಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳನ್ನು ನೇರವಾಗಿ ನೇಮಕಾತಿ ಮಾಡಿಕೊಳ್ಳಲಿದೆ. ಮಾನವ ಸಂಪನ್ಮೂಲ ಸಚಿವಾಲಯವು ಯುಜಿಸಿ, ಎಐಸಿಟಿಇಯೊಂದಿಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲೇ ಈ ಬಗೆಗಿನ ನಿಯಮಾವಳಿಗಳನ್ನು ಅಂತಿಮಗೊಳಿಸಲಿದೆ.
4 ವರ್ಷದ ಪದವಿಯನ್ನು ಅತ್ಯುತ್ತಮ ಅಂಕಗಳೊಂದಿಗೆ ಪಾಸು ಮಾಡಿದ ಅರ್ಹ ವಿದ್ಯಾರ್ಥಿಗಳನ್ನು ಮಾತ್ರ ಐಐಎಂನಲ್ಲಿ ಪಿಹೆಚ್ಡಿ ಮಾಡಲು ನೇರವಾಗಿ ನೇಮಕಗೊಳಿಸಲು ಚಿಂತನೆ ನಡೆಸಲಾಗಿದೆ. ಪಿಹೆಚ್ಡಿ ಪೂರೈಸುವ ಅವಧಿ 4 ವರ್ಷವಾಗಿರುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಐಐಟಿಗಳಂತೆ ಐಐಎಂಗಳಲ್ಲೂ ಪಿಹೆಚ್ಡಿ ಪದವಿಗೆ ವಿದ್ಯಾರ್ಥಿಗಳನ್ನು ನೇರವಾಗಿ ನೇಮಕಗೊಳಿಸಬೇಕು ಎಂಬ ಬೇಡಿಕೆಯನ್ನು ಐಐಎಂ ಬೆಂಗಳೂರು ಇಟ್ಟಿತ್ತು, ಈ ಬೇಡಿಕೆಯನ್ನು ಮಾನವ ಸಂಪನ್ಮೂಲ ಸಚಿವಾಲಯ ಪುರಸ್ಕರಿಸಿದೆ.
source; HINDUTANTIMES
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.