ಶ್ರೀನಗರದ ಹೊರವಲಯದಲ್ಲಿನ ವಂಬಲ್ ಪ್ರದೇಶದ ನೌಗಾಮ್ನಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ.
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಕಾದಾಟ ನಡೆಯುತ್ತಿದ್ದು, ಉಗ್ರರ ಸಂಪೂರ್ಣ ದಮನ ಪ್ರಕ್ರಿಯೆಯಲ್ಲಿ ಯೋಧರು ಮೇಲುಗೈ ಸಾಧಿಸುತ್ತಿದ್ದಾರೆ.
ಬುಧವಾರ ಶ್ರೀನಗರದ ಹೊರವಲಯದಲ್ಲಿನ ವಂಬಲ್ ಪ್ರದೇಶದ ನೌಗಾಮ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. ಬಲಿಯಾದ ಉಗ್ರರಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿಯನ್ನು ಆಧರಿಸಿ ಇಂದು ಮುಂಜಾನೆ ಸೇನಾ ಪಡೆಗಳು ಈ ಪ್ರದೇಶವನ್ನು ಆವರಿಸಿ ಶೋಧ ಕಾರ್ಯವನ್ನು ಆರಂಭಿಸಿದವು. ಈ ವೇಳೆ ಉಗ್ರರು ಏಕಾಏಕಿ ಗುಂಡು ಆರಿಸಲು ಆರಂಭಿಸಿದ್ದಾರೆ. ಈ ವೇಳೆ ನಡೆದ ಚಕಮಕಿಯಲ್ಲಿ ಇಬ್ಬರು ಉಗ್ರರು ನೆಲಕ್ಕುರುಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಕೌಂಟರ್ ನಡೆದ ಪ್ರದೇಶದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
source; ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.