ಪಣಜಿ: ಅನಾರೋಗ್ಯದ ಕಾರಣದಿಂದ ಕಛೇರಿಯಿಂದ ದೂರ ಉಳಿದಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಮುಂದಿನ ತಿಂಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ಗೋವಾ ಬಿಜೆಪಿ ಅಧ್ಯಕ್ಷ ವಿನಯ್ ತೆಂಡೂಲ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪರಿಕ್ಕರ್ ಇಲ್ಲದೆ ಗೋವಾದಲ್ಲಿ ಅಡಳಿತ ಯಂತ್ರ ಕುಸಿದಿದೆ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿರುವ ಪರಿಕ್ಕರ್ ಅವರು ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬದಲಿಗೆ ಬೆರೆಯವರನ್ನು ಗೋವಾ ಸಿಎಂ ಮಾಡಬೇಕು ಎಂಬ ಬೇಡಿಕೆಗಳು ಕೇಳಿ ಬರುತ್ತಿವೆ. ಆದರೆ ಬಿಜೆಪಿಗೆ ಈ ಬಗ್ಗೆ ಮನಸ್ಸಿಲ್ಲದ ಕಾರಣ ಅವರನ್ನೇ ಸಿಎಂ ಆಗಿ ಮುಂದುವರೆಸುವುದಾಗಿ ಸ್ಪಷ್ಟಪಡಿಸಿದೆ.
ಪರಿಕ್ಕರ್ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಮುಂದಿನ ತಿಂಗಳೇ ಅವರು ಕರ್ತವ್ಯಕ್ಕೆ ಹಾಜರಾಗುತ್ತಾರೆ ಎಂದು ತೆಂಡೂಲ್ಕರ್ ಹೇಳಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.