ನವದೆಹಲಿ: ಈಗಾಗಲೇ ನಡೆದಿರುವ 2015ರ ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (All India Pre Medical Test (AIPMT)ನ್ನು ವಜಾ ಮಾಡಿದ ಸುಪ್ರೀಂಕೋರ್ಟ್, ನಾಲ್ಕು ತಿಂಗಳೊಳಗೆ ಮತ್ತೊಮ್ಮೆ ಹೊಸದಾಗಿ ಪರೀಕ್ಷೆಯನ್ನು ನಡೆಸುವಂತೆ ಸಿಬಿಎಸ್ಸಿಗೆ ಸೋಮವಾರ ಸೂಚನೆ ನೀಡಿದೆ.
ಈ ಪರೀಕ್ಷೆಯ ಫಲಿತಾಂಶ ಜೂನ್ 5ರಂದು ಪ್ರಟಕವಾಗಬೇಕಿತ್ತು, ಆದರೆ ಇದರಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಲವಾರು ಮಂದಿ ನ್ಯಾಯಾಲಯದ ಮೊರೆ ಹೋಗಿದ್ದರು. ಹೀಗಾಗಿ ಫಲಿತಾಂಶ ಪ್ರಕಟಕ್ಕೆ ತಡೆ ನೀಡಲಾಗಿತ್ತು. ಸುಮಾರು 70 ವಿದ್ಯಾರ್ಥಿಗಳು ಪರೀಕ್ಷೆಯ ಪ್ರಶ್ನೆಯನ್ನು ಮೊಬೈಲ್ ಮೂಲಕ ಮುಂಚಿತವಾಗಿಯೇ ಪಡೆದುಕೊಂಡಿದ್ದರು ಎಂದು ಆರೋಪಿಸಲಾಗಿತ್ತು.
ಇದೀಗ ನ್ಯಾಯಾಲಯ ಆ ಪರೀಕ್ಷೆಯನ್ನು ರದ್ದು ಮಾಡಿ, ಹೊಸದಾಗಿ ಪರೀಕ್ಷೆ ನಡೆಸಲು ಸಿಬಿಎಸ್ಸಿಗೆ ನಿರ್ದೇಶನ ನೀಡಿದೆ. ಇದರಿಂದಾಗಿ 6.3 ಲಕ್ಷ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆಯನ್ನು ಎದುರಿಸಬೇಕಾಗಿದೆ.
ಹಗರಣದ ಆರೋಪದ ಬಗ್ಗೆ ಹರಿಯಾಣ ಪೊಲೀಸರು ತನಿಖೆಯನ್ನೂ ಕೈಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.