ನವದೆಹಲಿ: ಪರಿಸರಕ್ಕೆ ಯಾವುದೇ ತರಹದ ಹಾನಿಗಳು ಉಂಟಾಗದಂತೆ ಹಬ್ಬಗಳನ್ನು ಆಚರಿಸಿ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶದ ಜನರಿಗೆ ಕರೆ ನೀಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ತೀವ್ರ ಸ್ವರೂಪದಲ್ಲಿ ಹದಗೆಡುತ್ತಿರುವ ಹಿನ್ನಲೆಯಲ್ಲಿ ಕೋವಿಂದ್ ಈ ಕರೆ ಕೊಟ್ಟಿದ್ದಾರೆ.
‘ಚಳಿಗಾಲದ ಹಬ್ಬಗಳ ಸಮಯ ಆರಂಭವಾಗಿದೆ. ಈ ಸಮಯದಲ್ಲಿ ಮಾಲಿನ್ಯದ ಮಟ್ಟ ಏರಿಕೆಯಿಂದಾಗಿ ದೆಹಲಿಯಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಸಾಮಾಜಿಕ ಸಂಸ್ಥೆಗಳು ಪರಿಸರಕ್ಕೆ ಹಾನಿಯಾಗದಂತೆ, ಶಾಂತಿ ಮತ್ತು ಸೌಹಾರ್ದತೆ ಎತ್ತಿ ಹಿಡಿಯುವಂತೆ ಹಬ್ಬಗಳನ್ನು ಆಚರಿಸಲು ಜನರಿಗೆ ಜಾಗೃತಿಯನ್ನು ಮೂಡಿಸಬೇಕು’ ಎಂದು ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನದಲ್ಲಿ ಭಾಗಿಯಾಗಿದ್ದ ವೇಳೆ ಕೋವಿಂದ್ ಹೇಳಿದ್ದಾರೆ.
ಕಳೆದ ಕೆಲ ವಾರಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಸ್ವರೂಪದಲ್ಲಿ ಕುಸಿತವಾಗಿದೆ. ದಸರಾದ ವೇಳೆ ನೂರಾರು ಸಂಖ್ಯೆಯ ರಾವಣ ಮೂರ್ತಿಗಳ ದಹನ, ಪಟಾಕಿಗಳ ಹೊಡೆತ ಕೂಡ ಇದಕ್ಕೆ ಕಾರಣವಾಗಿದೆ. ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯೂ ವಾಯುಮಾಲಿನ್ಯದಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
source: catchnews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.