ನವದೆಹಲಿ: ಭಾರತ ಮತ್ತು ಮಯನ್ಮಾರ್ ದೇಶಗಳು ತಮ್ಮ ಗಡಿಯೊಳಗೆ ಕಾರ್ಯಾಚರಿಸುತ್ತಿರುವ ಬಂಡುಕೋರ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿವೆ. ಉಭಯ ದೇಶಗಳ ನಡುವಣ ಭದ್ರತಾ ಸಹಕಾರದ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಉಭಯ ದೇಶಗಳ ನಡುವಣ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಮಾತುಕತೆ ಶುಕ್ರವಾರ ಮುಕ್ತಾಯಗೊಂಡಿದ್ದು, ಅಂತಾರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಸಹಕಾರ ವೃದ್ಧಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ.
ಅಲ್ಲದೇ ಗಡಿಯಲ್ಲಿ ನಡೆಯುವ ಡ್ರಗ್ಸ್ ಮತ್ತು ವನ್ಯಜೀವಿಗಳ ಕಳ್ಳಸಾಗಾಣಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಹಕಾರ, ಅಂತಾರಾಷ್ಟ್ರೀಯ ಗಡಿ ನಿರ್ವಹಣಾ ಸಹಕಾರಗಳ ಬಗ್ಗೆ ಉಭಯ ದೇಶಗಳು ನಿರ್ಧಾರ ತೆಗೆದುಕೊಂಡಿವೆ.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.