ನವದೆಹಲಿ: ಐಆರ್ ಅಧಿಕಾರಿಯಾಗಿರುವ ಸಂಜಯ್ ಕುಮಾರ್ ಮಿಶ್ರಾ ಅವರು ಶನಿವಾರ ಜಾರಿ ನಿರ್ದೇಶನಾಲಯದ ನೂತನ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
ಆದಾಯ ತೆರಿಗೆ ಕೇಡರ್ನ 1948ರ ಬ್ಯಾಚ್ನ ಇಂಡಿಯನ್ ರೆವೆನ್ಯೂ ಸರ್ವಿಸ್ ಅಧಿಕಾರಿಯಾಗಿರುವ ಮಿಶ್ರಾ, ಕೇಂದ್ರೀಯ ತನಿಖಾ ಮಂಡಳಿಯ ಪ್ರಧಾನ ವಿಶೇಷ ನಿರ್ದೇಶಕರಾಗಿ ನೇಮಕವಾಗಿದ್ದು, ಹೆಚ್ಚುವರಿಯಾಗಿ 3 ತಿಂಗಳ ಅವಧಿಗೆ ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿದ್ದಾರೆ.
ಸಕ್ರಿಯ ನಿರ್ದೇಶಕರ ನೇಮಕವಾಗುವವರೆಗೆ, 3 ತಿಂಗಳ ಅವಧಿಗೆ ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಮಿಶ್ರಾ ಕಾರ್ಯನಿರ್ವಹಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಆಯ್ಕೆ ಸಮಿತಿ ಈ ನೇಮಕ ಮಾಡಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.