ಟೋಕಿಯೋ: ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಉನ್ನತ ಉದ್ಯಮಿಗಳನ್ನು ಭೇಟಿ ಮಾಡಿದ್ದು, ಭಾರತದೊಂದಿಗೆ ಹೆಚ್ಚಿನ ವ್ಯವಹಾರ ಇಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.
13ನೇ ಇಂಡೋ-ಜಪಾನ್ ವಾರ್ಷಿಕ ಸಮಿತ್ನಲ್ಲಿ ಭಾಗವಹಿಸುವ ಸಲುವಾಗಿ ಶನಿವಾರ ಜಪಾನ್ಗೆ ಬಂದಿಳಿದ ಮೋದಿ, ಅಲ್ಲಿನ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
‘ಉದ್ಯಮಿಗಳ ವೇದಿಕೆಯಲ್ಲಿ ಮೋದಿಗೆ ಉತ್ತಮ ಸ್ಪಂದನೆ ಸಿಕ್ಕಿದೆ, ಅವರು ಹಮ್ಮಿಕೊಂಡಿರುವ ಸುಧಾರಣಾ ಕ್ರಮಗಳನ್ನು ಅವರು ಸ್ವಾಗತಿಸಿದ್ದಾರೆ.
ಇನ್ನಷ್ಟು ಸುಧಾರಣೆಗೆ ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಟ್ವಿಟರ್ ಮೂಲಕ ತಿಳಿಸಿದ್ದಾರೆ.
ಬ್ಯುಸಿನೆಸ್ ಲೀಡರ್ಸ್ ಫೋರಂನಲ್ಲಿ ಸಿಕ್ಕಿರುವ ಫಲಿತಾಂಶ ಭಾರತಕ್ಕೆ ಜಾಗತಿಕ ಮನದಂಡವನ್ನು ಸಾಧಿಸಲು ನೆರವಾಗಲಿದೆ ಎಂದು ಬಣ್ಣಿಸಿದ್ದಾರೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.