ನವದೆಹಲಿ: ಕೇಂದ್ರ ಸಾರಿಗೆ ಸಚಿವಾಲಯವು 2019ರ ಜನವರಿ 1ರಿಂದ ದೇಶದ ಎಲ್ಲಾ ಸಾರ್ವಜನಿಕ ವಾಹನಗಳಲ್ಲಿ ವೆಹ್ಹಿಕಲ್ ಲೊಕೇಶನ್ ಟ್ರ್ಯಾಕಿಂಗ್(ವಿಎಲ್ಟಿ) ಮತ್ತು ಎಮರ್ಜೆನ್ಸಿ ಬಟನ್ಗಳನ್ನು ಕಡ್ಡಾಯಗೊಳಿಸಿದೆ.
ಆಟೋ ರಿಕ್ಷಾ ಮತ್ತು ಇ-ರಿಕ್ಷಾಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸಾರ್ವಜನಿಕ ವಾಹನಗಳಲ್ಲಿ ಎಮರ್ಜೆನ್ಸಿ ಬಟನ್ ಮತ್ತು ವಿಎಲ್ಟಿ ಅಳವಡಿಕೆ ಕಡ್ಡಾಯವಾಗಿದೆ. ರಾಷ್ಟ್ರೀಯ ಪರವಾನಗಿ ಹೊಂದಿದ ವಾಣಿಜ್ಯ ವಾಹನಗಳೂ ಇದನ್ನು ಅಳವಡಿಸುವುದು ಕಡ್ಡಾಯ.
ಮಹಿಳೆಯರಿಗೆ ಸೇರಿದಂತೆ ಎಲ್ಲಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.
ಈ ಬಗೆಗಿನ ಅಧಿಸೂಚನೆಯನ್ನು ಈಗಾಗಲೇ ಕೇಂದ್ರ ಸಾರಿಗೆ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ಕಳುಹಿಸಿಕೊಟ್ಟಿದೆ ಎಂದು ಸಚಿವಾಲಯ ಜಂಟಿ ಕಾರ್ಯದರ್ಶಿ ಪ್ರಿಯಾಂಕ್ ಭಾರ್ತಿ ಹೇಳಿದ್ದಾರೆ.
source: hindustantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.