ನವದೆಹಲಿ: ಮೊದಲ ಹಂತವಾಗಿ ದೇಶದ 53 ನಗರಗಳಲ್ಲಿ 114 ಆಧಾರ್ ಸೇವಾ ಕೇಂದ್ರಗಳು ಸ್ಥಾಪನೆಗೊಳ್ಳಲಿದೆ ಎಂದು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಹೇಳಿದೆ.
ಸಾರ್ವಜನಿಕರಿಗೆ ಆಧಾರ್ ಸಂಬಂಧಿತ ಪ್ರಕ್ರಿಯೆಗಳನ್ನು ಸುಲಲಿತವಾಗಿ ಸಿಗುವಂತೆ ಮಾಡಲು, ಡಾಟಾ ಭದ್ರತೆಯ ಬಗೆಗಿನ ಭಯವನ್ನು ಹೋಗಲಾಡಿಸಲು ಈ ಸೇವಾಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.
ಕ್ಯೂನಲ್ಲಿ ನಿಲ್ಲುವ ಸಮಯಗಳನ್ನು ತಗ್ಗಿಸಿ, ಎಲ್ಲಾ ಪ್ರಕ್ರಿಯೆಗಳನ್ನು ಆದಷ್ಟು ಬೇಗ ನಡೆಯುವಂತೆ ಇಲ್ಲಿ ನೋಡಿಕೊಳ್ಳಲಾಗುತ್ತದೆ. ಮುಂದಿನ ಹಂತಗಳಲ್ಲಿ ಇನ್ನಷ್ಟು ಸಂಖ್ಯೆಯ ಆಧಾರ್ ಸೇವಾ ಕೇಂದ್ರಗಳು ಸ್ಥಾಪನೆಯಾಗಲಿದೆ.
source: Hindustantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.