ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಎನ್ಕೌಂಟರ್ಗೆ 3 ಉಗ್ರರು ಬಲಿಯಾಗಿದ್ದಾರೆ. ಕಳೆದ ಮೂರು ದಿನಗಳಲ್ಲಿ ನಡೆಯುತ್ತಿರುವ ಎರಡನೇ ಎನ್ಕೌಂಟರ್ ಇದಾಗಿದೆ.
ಬುದ್ಗಾಂನ್ ಝಗೂ ಅರಿಝಲ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭಗೊಂಡಿದ್ದು, ಅವಿತಿದ್ದ ಉಗ್ರರ ಮೇಲೆ ಸೇನಾಪಡೆಗಳು ಗುಂಡಿನ ದಾಳಿ ನಡೆಸಿದ್ದವು. ಇದರಲ್ಲಿ 3 ಉಗ್ರರು ಹತ್ಯೆಯಾಗಿದ್ದಾರೆ. ಇತರರಿಗಾಗಿ ಶೋಧ ಕಾರ್ಯಾಚರಣೆ ಜರಗುತ್ತಿದೆ.
ಮಂಗಳವಾರವೂ ಪುಲ್ವಾಮ ಜಿಲ್ಲೆಯ ಟ್ರಾಲ್ನಲ್ಲಿ ಯೋಧರ ಕಣ್ಗಾವಲು ಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಬಳಿಕ ಸೇನಾಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.