ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಕನ್ನಡಿಗರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಶುಭ ಹಾರೈಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘ರಾಜ್ಯೋತ್ಸವದ ಸಂಭ್ರಮದಲ್ಲಿರುವ ಕರ್ನಾಟಕದ ನನ್ನ ಸಹೋದರಿ, ಸಹೋದರರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸವನ್ನು ಹೊಂದಿದ್ದು, ವಿವಿಧ ಕ್ಷೇತ್ರಗಳ ಪ್ರತಿಭಾವಂತರ ನೆಲೆಯಾಗಿದೆ. ರಾಜ್ಯದ ಜನರ ಸಂತೋಷ, ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2018
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೂ, ನಾಡಗೀತೆಯ ಸಾಲುಗಳನ್ನು ಟ್ವಿಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭಾಶಯಗಳನ್ನು ಕೋರಿದ್ದಾರೆ.
Greetings on Karnataka Rajyotsava. Rashtrakavi Kuvempu:
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ!ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂಧನರವತರಿಸಿದ
ಭಾರತ ಜನನಿಯ ತನುಜಾತೆ!
ಜಯ ಹೇ ಕರ್ನಾಟಕ ಮಾತೆ!— Nirmala Sitharaman (@nsitharaman) November 1, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.