ನವದೆಹಲಿ: ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದು, ಬಿಜೆಪಿ ದೇಶದ ಜನರ ಬದುಕಲ್ಲಿ ಸಕರಾತ್ಮಕ ಬದಲಾವಣೆಗಳನ್ನು ತರುತ್ತಿರುವುದರಿಂದ ಕಾಂಗ್ರೆಸ್ಗೆ ಯಾವುದೇ ಆಯ್ಕೆಗಳಿಲ್ಲದೆ ಸುಳ್ಳು ಆರೋಪ ಮಾಡುತ್ತಿದೆ ಎಂದಿದ್ದಾರೆ.
‘ಜನರನ್ನು ಮೂರ್ಖರನ್ನಾಗಿಸುವುದನ್ನು ನಿಲ್ಲಿಸಿ, ಜನ ಎಂದಿಗೂ ಮಕ್ಕಳಾಟಿಕೆಯನ್ನು ಒಪ್ಪಿಕೊಳ್ಳುವುದಿಲ್ಲ, ಕೇವಲ ತಮಾಷೆಯಾಗಿ ನೋಡುತ್ತಾರಷ್ಟೇ’ ಎಂದಿದ್ದಾರೆ.
ಮಚ್ಚಿಲ್ಶಹ್ರ್, ರಾಜ್ಸಮಂದ್, ಮಹಾಸಮುಂದ್, ಸಾತ್ನ, ಬೆತುಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ.
ಮಧ್ಯಪ್ರದೇಶದ ಪ್ರತಿ ಜಿಲ್ಲೆಗಳಲ್ಲಿ ಮೊಬೈಲ್ ಘಟಕವನ್ನು ಸ್ಥಾಪನೆ ಮಾಡುವುದಾಗಿ ರಾಹುಲ್ ಹೇಳಿದ್ದಾರೆ ಎಂಬ ಕಾರ್ಯಕರ್ತನ ಮಾತಿಗೆ ಪ್ರತಿಕ್ರಿಯಿಸಿದ ಮೋದಿ, ತಲೆಗೆಡಿಸಿಕೊಳ್ಳಬೇಡಿ, ಅವರು ಏನು ಹೇಳುತ್ತಾರೋ ಅದನ್ನು ಕೇಳಿ ಆನಂದಪಡಿ ಎಂದಿದ್ದಾರೆ.
source: Hindustantimes