ಬೆಂಗಳೂರು: ಸೇವಾ ಹಿರಿತನ ಪರಿಗಣಿಸಿ ಸೇವಾ ಭದ್ರತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರು ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದರು.
ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕಛೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು, ಪ್ರತಿಭಟನೆಯಲ್ಲಿ 100ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಭಾಗವಹಿಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು ಹಲವರ ವಿರುದ್ಧ ಲಾಠಿ ಪ್ರಹಾರ ಮಾಡಿದರು. ಅಲ್ಲದೇ ಹಲವರನ್ನು ಬಲವಂತವಾಗಿ ಬಂಧಿಸಿದ್ದಾರೆ. ಪೊಲೀಸರ ಈ ಕ್ರಮವನ್ನು ಪ್ರತಿಭಟನಾನಿರತರು ಖಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.