ನವದೆಹಲಿ: ಮಧ್ಯಪ್ರದೇಶ, ಮಿಜೋರಾಂ, ತೆಲಂಗಾಣ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಶುಕ್ರವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
230 ವಿಧಾನಸಭಾ ಸ್ಥಾನಗಳನ್ನು ಒಳಗೊಂಡ ಮಧ್ಯಪ್ರದೇಶದಲ್ಲಿ ಇಂದು ಬಿಜೆಪಿ 177 ಸದಸ್ಯರ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರು, ಈ ಬಾರಿಗೂ ಬುಧಿನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ತೆಲಂಗಾಣಕ್ಕೆ 28 ಸದಸ್ಯರ ಪಟ್ಟಿಯನ್ನು, ಮಿಜೋರಾಂಗೆ 24 ಸದಸ್ಯರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.
ಮಧ್ಯಪ್ರದೇಶ ಮತ್ತು ಮಿಜೋರಾಂಗೆ ನವೆಂಬರ್ 28ರಂದು ಚುನಾವಣೆ ನಡೆಯಲಿದೆ, ತೆಲಂಗಾಣದಲ್ಲಿ ಡಿ.7ರಂದು ಚುನಾವಣೆ ಜರುಗಲಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.