ನವದೆಹಲಿ: ನವದೆಹಲಿಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಕಾನೂನು ಅಥವಾ ಸುಗ್ರೀವಾಜ್ಞೆಯನ್ನು ತರಬೇಕು ಎಂದು ಆಧ್ಯಾತ್ಮ ಗುರು ಹಂಸ್ದೇವಾಚಾರ್ಯ ಒತ್ತಾಯಪಡಿಸಿದ್ದಾರೆ.
ಅಖಿಲ ಭಾರತೀಯ ಸಂತ್ ಸಮಿತಿ ಆಯೋಜಿಸಿದ್ದ ಎರಡು ದಿನಗಳ ‘ಧರ್ಮಾದೇಶ್’ನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾನೂನು ಅಥವಾ ಸುಗ್ರೀವಾಜ್ಞೆಯನ್ನು ಹೊರತುಪಡಿಸಿ ಬೇರೆ ಯಾವ ಸಂಧಾನವೂ ಈ ವಿಷಯದಲ್ಲಿ ಸಾಧ್ಯವಿಲ್ಲ ಎಂದಿದ್ದಾರೆ.
ರಾಮಮಂದಿರ ನಿರ್ಮಾಣ ಮಾಡಲು ಸರ್ಕಾರವನ್ನು ಬೆಂಬಲಿಸಬೇಕು ಮತ್ತು ಹಿಂದೂ ಒಗ್ಗಟ್ಟನ್ನು ಹಾಗೆಯೇ ಕಾಯ್ದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಅಲ್ಲದೇ ಅಕ್ರಮ ವಲಸಿಗರನ್ನು ಪತ್ತೆ ಮಾಡಲು ಎಲ್ಲಾ ರಾಜ್ಯಗಳಲ್ಲೂ ‘ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್’ ನಡೆಸಬೇಕು ಎಂದು ಆಗ್ರಹಿಸಿದರು.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.