ನವದೆಹಲಿ: ಈ ಬಾರಿಯ ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇದಾರನಾಥದಲ್ಲಿ ಆಚರಿಸುತ್ತಿದ್ದರೆ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ನಿಯೋಜಿತರಾಗಿರುವ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ರಕ್ಷಣಾ ಸಚಿವಾಲಯ, ‘ಯೋಧರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಈ ಬಾರಿಯೂ ಮುಂದುವರೆಸಲಾಗಿದ್ದು, ನಿರ್ಮಲಾ ಸೀತಾರಾಮನ್ ಅವರು ದಿಂಜನ್(ಅಸ್ಸಾಂ), ಆಂಧ್ರ ಲಾ ಓಂಕಾರ್ ಮತ್ತು ಅನಿನಿ( ಅರುಣಾಚಲ್ ಪ್ರದೇಶ)ದಲ್ಲಿರುವ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ’ ಎಂದಿದೆ.
ಚೀನಾದೊಂದಿಗಿನ ಗಡಿಯಲ್ಲಿನ ಮೂಲಸೌಕರ್ಯ ಅಭ್ಯರ್ಥಿ, ರಕ್ಷಣಾ ವ್ಯವಸ್ಥೆಗಳ ಬಗ್ಗೆಯೂ ಅವರು ಈ ಸಂದರ್ಭದಲ್ಲಿ ಪರಿಶೀಲನೆ ನಡೆಸಲಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.