ಕೊಡಗು: ಹಲವರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಈ ಬಾರಿಯೂ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ, ಈ ಕ್ರಮಕ್ಕೆ ತೀವ್ರವಾದ ವಿರೋಧಗಳು ವ್ಯಕ್ತವಾಗುತ್ತಿದ್ದು, ಕೊಡುಗು ಜಿಲ್ಲೆ ಸಂಪೂರ್ಣ ಬಂದ್ ಆಗಿದೆ.
ಬಿಜೆಪಿ, ಹಿಂದೂ ಪರ ಸಂಘಟನೆಗಳು, ಕೊಡವರು ಟಿಪ್ಪು ಜಯಂತಿ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದು, ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಮುಂಜಾಗೃತ ಕ್ರಮವಾಗಿ ಶಾಸಕ ಅಪ್ಪಚ್ಚು ರಂಜನ್, ವಿಧಾನಪರಿಷದ್ ಸದಸ್ಯ ಸುನೀಲ್ ಸುಬ್ರಮನಿ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.
ಕೊಡುಗು ಟಿಪ್ಪು ಜಯಂತಿ ವಿರೋಧಿ ಸಮಿತಿ ಇಂದು ಕೊಡುಗು ಬಂದ್ಗೆ ಕರೆ ನೀಡಿದೆ. ಖಾಸಗಿ ಬಸ್, ಆಟೋಗಳ ಒಡಾಟ ಅಲ್ಲಿ ಸ್ಥಗಿತಗೊಂಡಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು, ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಹೆಚ್ಚುವರಿ ಪೊಲೀಸ್ ಪಡೆಯನ್ನು ಭದ್ರತೆಗಾಗಿ ನಿಯೋಜನೆಗೊಳಿಸಲಾಗಿದೆ.
ವಿರೋಧಗಳ ನಡುವೆಯೂ ಸರ್ಕಾರ ಟಿಪ್ಪು ಜಯಂತಿ ಸಮಾರಂಭವನ್ನು ಏರ್ಪಡಿಸಿದೆ. ಆದರೆ ಸಿಎಂ ಕುಮಾರಸ್ವಾಮಿ ಇದರಲ್ಲಿ ಭಾಗಿಯಾಗುತ್ತಿಲ್ಲ. ಜಿ.ಪರಮೇಶ್ವರ್ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿದ್ದಾರೆ.
2015ರಲ್ಲಿ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ಓಲೈಕೆಗಾಗಿ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.