ವಡೋದರ: ಗುಜರಾತಿನ ನರ್ಮದಾ ನದಿ ತೀರದಲ್ಲಿ ನಿರ್ಮಾಣಗೊಂಡಿರುವ ದೇಶದ ಮೊದಲ ಗೃಹಸಚಿವ ಸರ್ದಾರ್ ವಲ್ಲಭಾಭಾಯ್ ಪಟೇಲ್ ಅವರ ವಿಶ್ವದ ಅತೀ ಎತ್ತರದ ಪ್ರತಿಮೆ ಈಗ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿ ಪರಿವರ್ತನೆಗೊಂಡಿದೆ.
ನವೆಂಬರ್ 1ರಂದು ಲೋಕಾರ್ಪಣೆಗೊಂಡಿರುವ 182 ಅಡಿ ಎತ್ತರದ ಈ ಪ್ರತಿಮೆ ಕೇವಲ 11 ದಿನಗಳಲ್ಲೇ 1.28 ಲಕ್ಷ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸಿದೆ. ಶನಿವಾರ, ಭಾನುವಾರಗಳಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಲೋಕಾರ್ಪಣೆಗೊಂಡ ಮೊದಲ ದಿನವೇ ಸುಮಾರು 10 ಸಾವಿರ ಜನರು ಇಲ್ಲಿಗೆ ಆಗಮಿಸಿದ್ದರು. ಬಳಿಕ ಶನಿವಾರ ಭಾನುವಾರಗಳಲ್ಲಿ ೫೦ ಸಾವಿರಕ್ಕಿಂತಲೂ ಹೆಚ್ಚಿನ ಜನ ಇಲ್ಲಿಗೆ ಆಗಮಿಸಿದ್ದಾರೆ.
ಈ ಬೃಹತ್ ಏಕತಾ ಪ್ರತಿಮೆಯ ನಿರ್ಮಾಣದಿಂದಾಗಿ ಗುಜರಾತಿನ ಪ್ರವಾಸೋದ್ಯಮದಲ್ಲಿ ಭಾರೀ ಏರಿಕೆ ಕಾಣುತ್ತಿದೆ ಎನ್ನಲಾಗಿದೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.