ನವದೆಹಲಿ: ಸಂಸತ್ತಿನ ಮುಂಬರುವ ಚಳಿಗಾಲದ ಅಧಿವೇಶನ ಡಿಸೆಂಬರ್ 11ರಿಂದ ಜನವರಿ 8ರವರೆಗೆ ಜರುಗಲಿದೆ.
ಅಧಿವೇಶನದ ದಿನಾಂಕವನ್ನು ಕೇಂದ್ರ ಸಚಿವ ವಿಜಯ್ ಗೋಯಲ್ ಅವರು ದೃಢಪಡಿಸಿದ್ದು, ‘2018ರ ಡಿಸೆಂಬರ್ 11ರಿಂದ, 2019ರ ಜನವರಿ 8ರವರೆಗೆ ಚಳಿಗಾಲದ ಅಧಿವೇಶನವನ್ನು ನಡೆಸಲು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ನಿರ್ಧರಿಸಿದೆ’ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಮಂಗಳವಾರ ರಾತ್ರಿ ಸಭೆ ಸೇರಿದ್ದು, ದಿನಾಂಕವನ್ನು ಅಂತಿಮಗೊಳಿಸಿದೆ.
ಪ್ರತಿವರ್ಷ ಚಳಿಗಾಲದ ಅಧಿವೇಶನ ನವೆಂಬರ್ನಲ್ಲಿ ಆರಂಭವಾಗುತ್ತದೆ, ಆದರೆ ಎರಡು ವರ್ಷಗಳಿಂದ ಡಿಸೆಂಬರ್ನಲ್ಲಿ ಆರಂಭಗೊಂಡಿದೆ. ರಾಜ್ಯ ವಿಧಾನಸಭಾ ಚುನಾವಣೆಗಳಿಂದಾಗಿ ಅಧಿವೇಶನ ಡಿಸೆಂಬರ್ಗೆ ಮುಂದೂಡಲ್ಪಟ್ಟಿದೆ ಎನ್ನಲಾಗಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.