ಬೆಂಗಳೂರು: ಮೂರು ರಾಜ್ಯಗಳಿಗೆ ನೀರುಣಿಸುವ ಕಾವೇರಿ ನದಿಯ ಗೌರವಾರ್ಥ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯ ಸಮೀಪ ‘ಕಾವೇರಿ ಮಾತೆ’ಯ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಯೋಜಿಸಿದೆ.
ಕೃಷ್ಣರಾಜ ಸಾಗರ ಜಲಾಶಯದ ಉದ್ಯಾನವನ್ನು ವಿಶ್ವದರ್ಜೆಗೆ ಏರಿಸುವ ಸುಮಾರು ರೂ.1,200 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, 400 ಎಕರೆ ಪ್ರದೇಶದಲ್ಲಿ ಹರಡಲಿದೆ. ಈ ಉದ್ಯಾನವನದಲ್ಲಿ ಕಾವೇರಿ ಪ್ರತಿಮೆ ರೂಪುಗೊಳ್ಳಲಿದೆ. ಮಹಿಳೆ ಹಿಡಿದ ಬಿಂದಿಗೆಯಿಂದ ನೀರು ಹೊರಬರುವ ಚಿತ್ರದ ಮಾದರಿಯಲ್ಲಿಯೇ ಈ ಪ್ರತಿಮೆ ನಿರ್ಮಾಣವಾಗಲಿದ್ದು, ಬಿಂದಿಗೆಯಿಂದ ನಿರಂತರವಾಗಿ ನೀರು ಸುರಿಯುವಂತೆ ಪಂಪ್ ಮೂಲಕ ನೀರು ಹರಿಸಲಾಗುತ್ತದೆ ಎನ್ನಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ.
ಅಮೆರಿಕದ ಡಿಸ್ನಿಲ್ಯಾಂಡ್ನಂತೆ ಕೆಆರ್ಎಸ್ ಅನ್ನು ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ. ಅಲ್ಲಿ ಕಾವೇರಿ ಪ್ರತಿಮೆಯೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಣ್ಣ ಪ್ರತಿಮೆಯೂ ರಚನೆಯಾಗಲಿದೆ ಎನ್ನಲಾಗಿದೆ.
ಕರ್ನಾಟಕದ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಸರ್ಕಾರ ಈ ಯೋಜನೆಯನ್ನು ತರುತ್ತಿದೆ. ಈ ಬಗ್ಗೆ ಬುಧವಾರ ಡಿಕೆಶಿ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ ಎನ್ನಲಾಗಿದೆ.
source: www.thenewsminute.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.