ನವದೆಹಲಿ: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದು, ಅವರಿಂದ ಅಪಾರ ಪ್ರಮಾಣ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಪೂಂಚ್ನ ಮೆಂದರ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಬಂಧನವಾಗಿದ್ದು, ಇವರು ಲಷ್ಕರ್ ಇ ತೋಯ್ಬಾ ಸಂಘಟನೆಗೆ ಸೇರಿದವರು ಎನ್ನಲಾಗಿದೆ.
ಭಾರತೀಯ ಸೇನಾ ಪಡೆ, ಜಮ್ಮು ಕಾಶ್ಮೀರ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿ ರಾಜೌರಿ-ಪೂಂಚ್ ಹೈವೇ ಸಮೀಪದ ಮೆಂದರ್ನಿಂದ ಇವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಎಕೆ-56 ರೈಫಲ್ ಸೇರಿದಂತೆ ಅಪಾರ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಅವರು ಪ್ರಯಾಣಿಸುತ್ತಿದ್ದ ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಯಾವ ಉಗ್ರ ಚಟುವಟಿಕೆಯನ್ನು ಅವರು ಅನುಷ್ಠಾನಕ್ಕೆ ತರಲು ಹವಣಿಸುತ್ತಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.