ನವದೆಹಲಿ: ಅತ್ಯಂತ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವುದು ನಮ್ಮ ಸರ್ಕಾರ ಪ್ರಮುಖ ಗುರಿಯಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ ಆಯೋಜನೆಗೊಳಿಸಿದ್ದ ‘ಪಾದಾಚಾರಿಗಳು ಮತ್ತು ಗಣನಾ ವಿಧಾನಗಳು’ ಎಂಬ ಅಂತಾರಾಷ್ಟ್ರೀಯ ವಿಚಾರಸಂಕಿರಣವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಅವರು ಮಾತನಾಡಿದರು.
‘ಅತೀ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡುವುದು ಕೇಂದ್ರ ಸಾರಿಗೆ ಸಚಿವಾಲಯದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ತಜ್ಞರು ಹೊಸ ಹೊಸ ತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕು’ ಎಂದು ಅವರು ಕರೆ ನೀಡಿದ್ದಾರೆ.
ಸ್ಥಳೀಯ ತ್ಯಾಜ್ಯ, ಕಚ್ಛಾ ವಸ್ತುಗಳನ್ನು ಬಳಸಿಕೊಳ್ಳಲು ಸಾಧ್ಯವಾಗುವಂತೆ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಬೇಕು ಎಂದ ಅವರು, ಗುಣಮಟ್ಟದೊಂದಿಗೆ ಯಾವುದೇ ರಾಜಿಯಿಲ್ಲದೆ ಅತ್ಯಂತ ಕಡಿಮೆ ವೆಚ್ಚ ಮತ್ತು ಕಡಿಮೆ ಅವಧಿಯಲ್ಲಿ ರಸ್ತೆ ನಿರ್ಮಾಣವಾಗುವಂತೆ ತಂತ್ರಜ್ಞಾನ ಅಭಿವೃದ್ಧಿಗೊಳ್ಳಬೇಕು ಎಂಬ ಆಶಯ ವ್ಯಕ್ತಪಡಿಸಿದರು.
ಎರಡು ದಿನಗಳ ಕಾಲ ಈ ವಿಚಾರಸಂಕಿರಣ ಜರುಗಲಿದ್ದು, ಪಾದಾಚಾರಿ ಮಾರ್ಗಗಳ ನಿರ್ಮಾಣ, ವಿನ್ಯಾಸದ ಬಗ್ಗೆ ಚರ್ಚೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.