ಶಿಲ್ಲಾಂಗ್: ಬುಡಕಟ್ಟು ಪ್ರದೇಶಗಳಲ್ಲಿ ಮಕ್ಕಳ ವಿದ್ಯಾಭ್ಯಾಸ ಹಾಗೂ ಶೈಕ್ಷಣಿಕ ಪೋಷಣೆಗಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮೇಘಾಲಯದಲ್ಲಿ 36 ಏಕಲವ್ಯ ಮಾದರಿಯ ವಸತಿ ಶಾಲೆಗಳನ್ನು ಸ್ಥಾಪಿಸಲು ಮುಂದಾಗಿದೆ. ಪ್ರತಿ ಶಾಲೆಯ ನಿರ್ಮಾಣಕ್ಕೆ ಸುಮಾರು 20 ಕೋಟಿ ವೆಚ್ಚವಾಗಲಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವಲ್ ಒರಂ ಹೇಳಿದ್ದಾರೆ. ಮೂರು ವರ್ಷಗಳಲ್ಲಿ 36 ಶಾಲೆಗಳನ್ನು ನಿರ್ಮಿಸುವ ಯೋಜನೆ ಇದಾಗಿದೆ ಎಂದು ಅವರು ಹೇಳಿದ್ದಾರೆ.
ಸಮಾರಂಭದಲ್ಲಿ ಮಾತನಾಡಿದ ಸಚಿವ ಜುವಲ್ ಒರಂ, ’ಮೇಘಾಲಯದಲ್ಲಿ ಒಟ್ಟು 36 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಸ್ಥಾಪಿಸಲು ಬುಡಕಟ್ಟು ವ್ಯವಹಾರಗಳ ಸಚಿವಾಲಯ ಚಿಂತನೆ ನಡೆಸುತ್ತಿದೆ. ಬುಡಕಟ್ಟು ವ್ಯವಹಾರಗಳ ಸಚಿವಾಲಯದಡಿಯಲ್ಲಿ ಸ್ಥಾಪನೆಗೊಳ್ಳಲಿರುವ ಈ ಶಾಲೆಗಳು, ಬುಡಕಟ್ಟು ಪ್ರದೇಶದಲ್ಲಿರುವ ಪರಿಶಿಷ್ಟ ಪಂಗಡಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ವದ ಪಾತ್ರವಹಿಸಲಿವೆ’ ಎಂದರು.
ಪ್ರಸ್ತುತ, ದೇಶದಾದ್ಯಂತ 192 ಏಕಲವ್ಯ ಮಾದರಿ ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರ ಇಂತಹ 500 ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.