ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದ ಪ್ರಮುಖ ಸಚಿವರಲ್ಲಿ ಒಬ್ಬರಾದ ಸುಷ್ಮಾ ಸ್ವರಾಜ್ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದಿದ್ದಾರೆ.
ಮಧ್ಯಪ್ರದೇಶದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭ ಅವರು ಈ ಮಾತನ್ನು ಹೇಳಿದ್ದಾರೆ. ಆರೋಗ್ಯ ಕಾರಣಕ್ಕಾಗಿ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.
’ಪಕ್ಷ ಚುನಾವಣೆಯ ಸ್ಪರ್ಧಿಗಳನ್ನು ನಿರ್ಧರಿಸುತ್ತದೆ, ಆದರೆ ನಾನು ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸಬಾರದೆಂದು ನಿರ್ಧಾರ ತೆಗೆದುಕೊಂಡಾಗಿದೆ. ಈ ಬಗ್ಗೆ ಪಕ್ಷಕ್ಕೂ ಮಾಹಿತಿ ನೀಡಿದ್ದೇನೆ’ ಎಂದಿದ್ದಾರೆ.
ಸುಷ್ಮಾ ಅವರು ಮಧ್ಯಪ್ರದೇಶದ ವಿಧಿಶಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿದ್ದಾರೆ.
ಆದರೆ ಅತ್ಯುತ್ತಮ ವಾಗ್ಮಿ ಮತ್ತು ಸದನದಲ್ಲಿ ಪ್ರತಿಪಕ್ಷಗಳ ನಿದ್ದೆಗಡಿಸುವ ವ್ಯಕ್ತಿತ್ವವುಳ್ಳವರು. ಅವರನ್ನು ಅಷ್ಟು ಸುಲಭವಾಗಿ ಪಕ್ಷ ಬಿಟ್ಟುಕೊಡಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯಸಭೆಗೆ ಆಯ್ಕೆ ಮಾಡುವ ಮೂಲಕ ಅವರನ್ನು ಸಚಿವೆ ಮಾಡುವ ನಿರ್ಧಾರವನ್ನು ಬಿಜೆಪಿ ಮಾಡಿದೆ ಎನ್ನಲಾಗಿದೆ.
source: ndtv
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.