ಲಕ್ನೋ: ಪತ್ರಕರ್ತನ ಹತ್ಯೆಯ ಆರೋಪ ಹೊತ್ತಿರುವ ಉತ್ತರಪ್ರದೇಶ ಸಚಿವ ರಾಮ್ ಮೂರ್ತಿ ವರ್ಮಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ಅವರು ನಿರಾಕರಿಸಿದ್ದಾರೆ.
ಶಹಜಹಾನ್ಪುರದಲ್ಲಿ ಪತ್ರಕರ್ತ ಜಗೇಂದ್ರ ಸಿಂಗ್ ಅವರನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ಹತ್ಯೆ ಮಾಡಿದ್ದರು, ಈ ಹತ್ಯೆಯ ಹಿಂದೆ ವರ್ಮಾ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಗೇಂದ್ರ ಅವರ ಕುಟುಂಬ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಆದರೆ ಇದು ಯಾವುದಕ್ಕೂ ಜಗ್ಗದ ಅಖಿಲೇಶ್, ವರ್ಮಾ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಯಾರಿಗೂ ಅನ್ಯಾಯವಾಗಲು ಬಿಡಲಾರೆ ಎಂದಿದ್ದಾರೆ.
ಅಖಿಲೇಶ್ ಕ್ರಮಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದೆ. ಉತ್ತರಪ್ರದೇಶದಲ್ಲಿ ಕಾನೂನು ವ್ಯವಸ್ಥೆ ಹದಗೆಡುತ್ತಿದ್ದರೂ ಸರ್ಕಾರ ಕೈಕಟ್ಟಿ ಕುಳಿತಿರುವುದು ಅಲ್ಲಿನ ಜನರನ್ನು ಕೆರಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.