ಸುಕ್ಮಾ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆ ಮಾಡುವಲ್ಲಿ ಸೋಮವಾರ ಯಶಸ್ವಿಯಾಗಿವೆ.
ಜಿಲ್ಲಾ ಮೀಸಲು ಪಡೆ, 206 ಮತ್ತು 208 ಕೋಬ್ರಾ ಘಟಕ, ಸಿಆರ್ಪಿಎಫ್ ಜಂಟಿಯಾಗಿ ಸಕ್ಲರ್ ಗ್ರಾಮದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿವೆ, ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಹತ್ಯೆಯಾದ ಎಂಟು ನಕ್ಸಲರ ದೇಹವನ್ನು ಮತ್ತು ಅವರ ಬಳಿಯಿದ್ದ ಎರಡು ರೈಫಲ್, ಟಿಫಿನ್ ಬಾಂಬ್ಗಳನ್ನು ವಶಕ್ಕೆ ಪಡೆಯಲಾಗಿದೆ. 8 ಮಂದಿಯ ಪೈಕಿ ಒಬ್ಬ ನಕ್ಸಲನ ಗುರುತಷ್ಟೇ ಪತ್ತೆಯಾಗಬೇಕಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.