ಜಮ್ಮು: ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಎನ್ಕೌಂಟರ್ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಘಟನೆಯಲ್ಲಿ ಒಬ್ಬರು ಯೋಧ ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಕುಲ್ಗಾಂನ ರೆದ್ವಾನಿಯಲ್ಲಿ ಎನ್ಕೌಂಟರ್ನ್ನು ನಡೆಸಲಾಯಿತು. ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಉಳಿದ ಉಗ್ರರಿಗಾಗಿ ಶೋಧ ಕಾರ್ಯವನ್ನು ನಡೆಸುತ್ತಿವೆ.
ಪುಲ್ವಾಮ ಜಿಲ್ಲೆಯ ಟ್ರಾಲ್ ನ ಹಫೂ ಪ್ರದೇಶದಲ್ಲೂ ಎನ್ಕೌಂಟರ್ನ್ನು ಆರಂಭಿಸಲಾಗಿದೆ.
ಮೂರು ದಿನಗಳ ಹಿಂದೆಯಷ್ಟೇ ಅನಂತ್ನಾಗ್ನ ಸೆಕಿಪೋರದಲ್ಲಿ ನಡೆದ ಎನ್ಕೌಂಟರ್ನಲ್ಲಿ 8 ಉಗ್ರರನ್ನು ಹತ್ಯೆ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.