ಬೆಳ್ತಂಗಡಿ: ಪಂಜಾಬ್ ನ್ಯಾಶನಲ್ ಬ್ಯಾಂಕ್ನ ಆರ್ಸೆಟಿ ನಿರ್ದೇಶಕರುಗಳ 5ನೇ ವಾರ್ಷಿಕ ಸಮಾವೇಶವನ್ನು ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಸೋಮವಾರ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ರೇಣುಕಾ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯಲ್ಲಿ ಆರ್ಸೆಟಿಗಳ ಪಾತ್ರವನ್ನು ಅವರು ಶ್ಲಾಘಿಸಿ ಅಭಿನಂದಿಸಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ಅಧ್ಯಕ್ಷತೆ ವಹಿಸಿ ಶುಭಾಶಂಸನೆ ಮಾಡಿದರು. ಆರ್ಸೆಟಿಗಳ ನಿರ್ವಹಣಾ ಘಟಕದ ಮುಖ್ಯ ಯೋಜನಾ ಸಂಯೋಜಕ ಕೆ.ಎನ್. ಜನಾರ್ದನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಂಜಾಬ್ ನ್ಯಾಶನಲ್ ಬ್ಯಾಂಕ್ನ ಉಪ ಮಹಾಪ್ರಬಂಧಕ ಎನ್.ಕೆ. ಮಿತ್ತಲ್, ಕಾರ್ಯನಿರ್ವಾಹಕ ನಿರ್ದೇಶಕ ಟಿ.ಪಿ. ಜಗದೀಶ ಮೂರ್ತಿ, ವಿ.ಕಲಕುಂದ್ರಿ ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.