ನವದೆಹಲಿ: ನಂಬಲಾರ್ಹ ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ, ಅರುಣಾಚಲಪ್ರದೇಶಗಳ ವಿಧಾನಸಭಾ ಚುನಾವಣೆಗಳನ್ನು 2019ರ ಲೋಕಸಭಾ ಚುನಾವಣೆಯೊಂದಿಗೆ ನಡೆಸುವ ನಿರೀಕ್ಷೆ ಇದೆ.
ಈ ನಾಲ್ಕು ರಾಜ್ಯಗಳ ವಿಧಾನಸಭಾ ಅವಧಿ 2019ರ ಮೇ ಮತ್ತು ಜೂನ್ ತಿಂಗಳಲ್ಲಿ ಅಂತ್ಯವಾಗಲಿದೆ.
ಅಷ್ಟೇ ಅಲ್ಲದೇ, ಪ್ರಸ್ತುತ ರಾಷ್ಟ್ರಪತಿ ಆಡಳಿತದಲ್ಲಿರುವ ಜಮ್ಮು ಕಾಶ್ಮೀರಕ್ಕೂ ಲೋಕಸಭಾ ಚುನಾವಣೆಯೊಂದಿಗೆಯೇ ಚುನಾವಣೆಯನ್ನು ನಡೆಸುವ ಸಾಧ್ಯತೆಯ ಬಗ್ಗೆ ಚುನವಣಾ ಆಯೋಗ ಚಿಂತನೆ ನಡೆಸುತ್ತಿದೆ. ಆದರೆ ಲೋಕಸಭಾ ಚುನಾವಣೆಗು ಮುನ್ನವೇ ಕಣಿವೆ ರಾಜ್ಯ ಚುನಾವಣೆಯನ್ನು ಎದುರಿಸುತ್ತಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಗೆಂದು ಹೆಚ್ಚಿನ ಪ್ರಮಾಣದಲ್ಲಿ ಭದ್ರತಾ ಪಡೆಗಳು ಸರ್ಕಾರ ನಿಯೋಜನೆಗೊಳಿಸುತ್ತದೆ, ಇದೇ ವೇಳೆ ವಿಧಾನಸಭಾ ಚುನಾವಣೆಯೂ ನಡೆದು ಹೋದರೆ ಮತ್ತೊಮ್ಮೆ ಭದ್ರತಾ ಪಡೆಗಳನ್ನು ನಿಯೋಜಿಸುವ ಶ್ರಮ ಉಳಿಯುತ್ತದೆ ಎಂಬ ಲೆಕ್ಕಾಚಾರಗಳನ್ನೂ ಹಾಕಲಾಗುತ್ತಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.