ಮಂಗಳೂರು: ಮಂಗಳೂರಿನ ಹೊರ ವಲಯದ ಗಂಜಿಮಠದಲ್ಲಿನ ಟೆಲಿಫೋನ್ ಎಕ್ಸ್ಚೇಂಜ್ ಕಟ್ಟಡದ ಸಮೀಪ ಮಂಗಳವಾರ ಎರಡು ತಲವಾರು ಮತ್ತು 8 ಪೆಟ್ರೋಲ್ ಬಾಂಬ್ಗಳು ಪತ್ತೆಯಾಗಿವೆ. ಇದರಿಂದಾಗಿ ಸಾರ್ವಜನಿಕರಲ್ಲಿ ಭಾರೀ ಆತಂಕ ಮನೆ ಮಾಡಿದೆ.
ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಗಲಭೆ ನಡೆಸುವ ಸಲುವಾಗಿ ಈ ತಲವಾರುಗಳನ್ನು ಮತ್ತು ಪೆಟ್ರೋಲ್ ಬಾಂಬ್ಗಳನ್ನು ಹುದುಗಿಸಿಡಲಾಗಿದೆ ಎಂದು ಶಂಕಿಸಲಾಗಿದೆ. ಈ ಕೃತ್ಯದ ಹಿಂದೆ ಯಾರಿದ್ದಾರೆ, ಪೆಟ್ರೋಲ್ ಬಾಂಬ್ ಎಲ್ಲಿಂದ ತರಲಾಗಿದೆ, ಇದರ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.