ನವದೆಹಲಿ: 2018ರಲ್ಲೂ ಭಾರತದ ಅತೀ ಹೆಚ್ಚು ಸುದ್ದಿಯಲ್ಲಿರುವ ವ್ಯಕ್ತಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೊರಹೊಮ್ಮಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎರಡನೇ ಸ್ಥಾನ ಪಡೆದಿದ್ದಾರೆ.
ಯಾಹೂ ಇಯರ್ ಇನ್ ರಿವ್ಯೂವ್ ಲಿಸ್ಟ್ನಲ್ಲಿ, ಮೋದಿ ಈ ಬಾರಿಯೂ ಅತ್ಯಂತ ಸುದ್ದಿಯಲ್ಲಿರುವ ವ್ಯಕ್ತಿಯಾಗಿದ್ದಾರೆ. ತ್ರಿವಳಿ ತಲಾಖ್, 377 ಕಾಯ್ದೆ ಬಗ್ಗೆ ತೀರ್ಪು ನೀಡಿರುವ ಸುಪ್ರೀಂಕೋರ್ಟ್ನ ಮಾಜಿ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು 3ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ನಾಲ್ಕನೇ ಮತ್ತು ಐದನೇ ಸ್ಥಾನವನ್ನು ಕ್ರಮವಾಗಿ ಆರ್ಥಿಕ ಅಪರಾಧಿಗಳಾದ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಪಡೆದುಕೊಂಡಿದ್ದಾರೆ.
ಮೀ ಟೂ ಆರೋಪದಿಂದ ಸಚಿವ ಹುದ್ದೆಯನ್ನು ಕಳೆದುಕೊಂಡಿರುವ ಕೇಂದ್ರ ಸಚಿವ ಎಂ.ಜೆ ಅಕ್ಬರ್ ಅವರು 6ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಟ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅತ್ಯಂತ ಸುದ್ದಿಯಲ್ಲಿದ್ದ ದಂಪತಿಗಳಾಗಿದ್ದಾರೆ.
2 ವರ್ಷ ಕೆಳಗಿನ ವಯಸ್ಸಿನಲ್ಲಿ ನಟಿ ಕರೀನಾ ಕಪೂರ್ ಪುತ್ರ ತೈಮೂರ್ ಅಲಿ ಖಾನ್ ನಂ.1 ಸ್ಥಾನ ಪಡೆದುಕೊಂಡಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.