ಫಾರುಖಾಬಾದ್: ಬಾಂಗ್ಲಾದೇಶ, ಪಾಕಿಸ್ಥಾನ, ಸಿರಿಯಾದಂತಹ ಮುಸ್ಲಿಂ ರಾಷ್ಟ್ರಗಳು ಭಾರತದ ಧರ್ಮಗಳ ಬಗ್ಗೆ ತಿಳಿದುಕೊಳ್ಳಬೇಕು, ಇದರಿಂದ ವಿಶ್ವದಲ್ಲಿ ಶಾಂತಿ ಸ್ಥಾಪನೆ ಸಾಧ್ಯವಾಗುತ್ತದೆ ಎಂದು ಬೌದ್ಧ ಧಾರ್ಮಿಕ ಗುರು ದಲೈಲಾಮ ಹೇಳಿದ್ದಾರೆ.
ಫಾರುಖಾಬಾದ್ನಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.
‘125 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ಹಲವಾರು ಧರ್ಮ, ಸಂಪ್ರದಾಯಗಳಿವೆ. ಮುಸ್ಲಿಂ ರಾಷ್ಟ್ರಗಳು ಭಾರತವನ್ನು ನೋಡಿ ಕಲಿತರೆ ಶಾಂತಿ ಸಾಧ್ಯವಾಗಲಿದೆ. ಭಾರತದಲ್ಲಿನ ಎಲ್ಲಾ ಧರ್ಮಗಳು ಪರಸ್ಪರ ಬೆಸೆದುಕೊಂಡಿವೆ ಮತ್ತು ಅಹಿಂಸೆ, ಆಧುನಿಕತೆಗಳಿಂದ ದೇಶ ಅಭಿವೃದ್ಧಿಯಾಗುತ್ತಿದೆ’ ಎಂದಿದ್ದಾರೆ.
ಡೊಕ್ಲಾಂ ಬಿಕ್ಕಟ್ಟು ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಚೀನಾ ಮತ್ತು ಭಾರತ ದೇಶಗಳು ಪರಸ್ಪರ ಕುಳಿತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಹಿಂದಿ-ಚೀನಿ ಭಾಯಿ ಭಾಯಿ ಘೋಷಣೆಯನ್ನು ವಾಸ್ತವ ಮಾಡಬೇಕು’ ಎಂದರು.
source: www.timesnownews.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.