ಲಕ್ನೋ: ಗೋ ಹತ್ಯೆ, ಅಕ್ರಮ ಗೋ ಸಾಗಾಟ, ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಬುಲಂದ್ಸರದಲ್ಲಿ ಗೋಹತ್ಯೆಗೆ ಸಂಬಂಧಿಸಿದಂತೆ ಗುಂಪು ಹಲ್ಲೆ ನಡೆದ ಹಿನ್ನಲೆಯಲ್ಲಿ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಸಿಎಂ ಅವರ ಈ ಆದೇಶವನ್ನು, ಅವರ ಮುಖ್ಯ ಕಾರ್ಯದರ್ಶಿ ಅನುಪ್ ಪಾಂಡೆಯವರು ಎಲ್ಲಾ 74 ಜಿಲ್ಲೆಗಳ ಮ್ಯಾಜಿಸ್ಟ್ರೇಟ್ ಮತ್ತು ಸುಪರಿಟೆಂಡೆಂಟ್ ಆಫ್ ಪೊಲೀಸ್ಗಳಿಗೆ ವೀಡಿಯೋ ಲಿಂಕ್ ಮೂಲಕ ರವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಇಂತಹ ಪ್ರಕರಣಗಳಲ್ಲಿ ಯಾವುದೇ ದೋಷಗಳು ಕಂಡು ಬಂದರೆ ಅದಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೇ ಕಾರಣರಾಗುತ್ತಾರೆ ಎಂದು ಯೋಗಿ ಎಚ್ಚರಿಕೆ ನೀಡಿದ್ದಾರೆ.
ಬುಲಂದ್ಸರ್ ಹಿಂಸಾಚಾರದ ವೇಳೆ ಹತ್ಯೆಗೀಡಾದ ಪೊಲೀಸ್ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಕುಟುಂಬಿಕರನ್ನು ಇಂದು ಯೋಗಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
source: www.newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.