ಹೈದರಾಬಾದ್: ಆಂಧ್ರಪ್ರದೇಶದಿಂದ ಬೇರ್ಪಟ್ಟ ಬಳಿಕ ಎರಡನೇ ಬಾರಿಗೆ ತೆಲಂಗಾಣ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಶುಕ್ರವಾರ ಬೆಳಗಿನಿಂದಲೇ ಅಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಹಿಂದಿನ ಬಾರಿ 63 ಸ್ಥಾನಗಳನ್ನು ಗೆದ್ದು, ಅಧಿಕಾರದ ಗದ್ದುಗೆಯನ್ನು ಏರಿದ್ದ ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ಎಸ್, ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ, ಬಿಜೆಪಿ ನಡುವೆ ಇಲ್ಲಿ ತ್ರಿಕೋಣ ಸ್ಪರ್ಧೆ ನಡೆಯುತ್ತಿದೆ.
119 ವಿಧಾನಸಭಾ ಸ್ಥಾನಗಳಿಗೆ 32,815 ಮತಗಟ್ಟೆಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಒಟ್ಟು 1821 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಂದೇ ಹಂತದಲ್ಲಿ ನಡೆಯುವ ಮತದಾನದಲ್ಲಿ ಸುಮಾರು 2.80 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಒಂದೂವರೆ ಲಕ್ಷಕ್ಕೂ ಅಧಿಕ ಸಿಬ್ಬಂದಿ ಮತದಾನ ಪ್ರಕ್ರಿಯೆಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಡಿಸೆಂಬರ್ 11ರಂದು ಫಲಿತಾಂಶ ಹೊರಬೀಳಲಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.