ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಡೆಸಲು ಉದ್ದೇಶಿಸಿರುವ ರಥ ಯಾತ್ರೆಯನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿರುಸಿನ ಟೀಕಾಸ್ತ್ರ ಪ್ರಯೋಗಿಸಿರುವ ಅವರು, ರಾಜ್ಯದಲ್ಲಿ ಟಿಎಂಸಿ ಪಕ್ಷ ಅತ್ಯಂತ ಕೀಳು ಮಟ್ಟದ ರಾಜಕಾರಣದಲ್ಲಿ ತೊಡಗಿದೆ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದಿದ್ದಾರೆ. ಅಲ್ಲದೇ, ಬಿಜೆಪಿ ರಥಯಾತ್ರೆ ಬಗ್ಗೆ ಬ್ಯಾನರ್ಜಿ ಭಯಭೀತಗೊಂಡಿದ್ದಾರೆ, ಅದೇ ಕಾರಣಕ್ಕೆ ಅದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ಉದ್ದೇಶಿಸಿರುವ ಮೂರು ಸಮಾವೇಶಗಳು ಯಶಸ್ವಿಗೊಂಡರೆ, ಪಶ್ಚಿಮಬಂಗಾಳದ ಸ್ವರೂಪ ಬದಲಾವಣೆಗೆ ಶಿಲಾನ್ಯಾಸ ನೆರವೇರಿದಂತಾಗುತ್ತದೆ ಎಂದು ಬ್ಯಾನರ್ಜಿಯವರಿಗೆ ತಿಳಿದಿದೆ, ಇದೇ ಕಾರಣಕ್ಕೆ ಅವರು ಅನುಮತಿ ನಿರಾಕರಣೆ ಮಾಡುತ್ತಿದ್ದಾರೆ ಎಂದಿದ್ದಾರೆ.
ಬಿಜೆಪಿ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸುವ ಮೂಲಕ ನೀವು ಜನರ ಆಕ್ರೋಶವನ್ನು ಆಹ್ವಾನಿಸುತ್ತಿದ್ದೀರಿ ಎಂದು ಎಚ್ಚರಿಕೆ ನೀಡಿದ್ದಾರೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.