ಮುಂಬಯಿ: ತನ್ನ ವೇದಿಕೆಯಲ್ಲಿ ಹರಿದಾಡುವ ನಕಲಿ ಸುದ್ದಿಗಳ ಮೂಲವನ್ನು ಪತ್ತೆಹಚ್ಚುವ ಸಲುವಾಗಿ ವಾಟ್ಸಾಪ್ನ ಹಿರಿಯ ಅಧಿಕಾರಿಗಳು, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಭಾರತದಲ್ಲಿ 220 ಮಿಲಿಯನ್ ಬಳಕೆದಾರರನ್ನು ಹೊಂದಿರುವ ವಾಟ್ಸಾಪ್ನಲ್ಲಿ ನಕಲಿ ಸುದ್ದಿಗಳು ಬಿತ್ತರವಾದರೆ ಸಮಾಜದ ಮೇಲೆ ಅತ್ಯಂತ ಕೆಟ್ಟ ದುಷ್ಪರಿಣಾಮ ಬೀರುತ್ತದೆ. ಕೇಂದ್ರ ಸರ್ಕಾರ ಕೂಡ ಈ ಬಗ್ಗೆ ವಾಟ್ಸಾಪ್ಗೆ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ನಕಲಿ ಸುದ್ದಿ ಹರಿದಾಡುವುದನ್ನು ಪತ್ತೆ ಹಚ್ಚಲು ವಾಟ್ಸಾಪ್ ಹಲವಾರು ಪ್ರಯತ್ನಗಳನ್ನು ನಡೆಸುತ್ತಿದೆ.
ಇದೀಗ ಐಟಿ ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿರುವ ವಾಟ್ಸಾಪ್ ಸಂಸ್ಥೆಯ ಅಧಿಕಾರಿಗಳು, ನಕಲಿ ಸುದ್ದಿಗಳ ತಡೆಗೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈಗಾಗಲೇ ವಾಟ್ಸಾಪ್, ಟಿವಿ ಮತ್ತು ರೇಡಿಯೋಗಳ ಮೂಲಕ ನಕಲಿ ಸುದ್ದಿಯಿಂದಾಗುವ ಅಪಾಯದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದೆ.
source: www.ndtv.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.