ಚಂಡೀಗಢ: ಶೀಘ್ರದಲ್ಲೇ ಹರಿಯಾಣ 230 ಕಿಲೋಮೀಟರ್ ಉದ್ದದ ಹೊಸ ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಲಿದೆ.
ಕುರುಕ್ಷೇತ್ರ ಜಿಲ್ಲೆಯಿಂದ ಮಹೇಂದ್ರಘರ್ ಜಿಲ್ಲೆಯವರೆಗೆ 230 ಕಿಲೋಮೀಟರ್ ಉದ್ದದ ರಸ್ತೆ ರೂ. 5,108 ವೆಚ್ಚದಲ್ಲಿ ನಿರ್ಮಾಣವಾಗಲಿದೆ, ಇದಕ್ಕೆ ಎನ್ಎಚ್-152ಡಿ ಎಂದು ಹೆಸರು ನೀಡಲಾಗುತ್ತದೆ ಎಂದು ಹರಿಯಾಣ ಸಿಎಂ ಮನೋಹರ್ಲಾಲ್ ಖಟ್ಟರ್ ಅವರ ವಕ್ತಾರರು ತಿಳಿಸಿದ್ದಾರೆ.
ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೋಮವಾರ ಮಹತ್ವದ ಸಭೆ ನಡೆದಿದ್ದು, ಹೆದ್ದಾರಿಗಾಗಿ ಭೂಮಿ ಕಳೆದುಕೊಳ್ಳಲಿರುವ ರೈತರುಗಳೂ ಈ ಸಭೆಯಲ್ಲಿ ಭಾಗಿಯಾಗಿದ್ದರು. ಅಧಿಕಾರಿಗಳು ಅವರ ಕುಂದುಕೊರತೆಗಳನ್ನು ಆಲಿಸಿದರು ಎನ್ನಲಾಗಿದೆ.
ಎನ್ಎಚ್-152ಡಿ ನಿರ್ಮಾಣದಿಂದ ಹರಿಯಾಣದ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಭೂ ಸ್ವಾಧೀನ ಮಸೂದೆ ಕಾಯ್ದೆಯ ನಿಯಮದಂತೆಯೇ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.