ನವದೆಹಲಿ: ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಆಯಾ ರಾಜ್ಯ ಸರ್ಕಾರಗಳ ಆಡಳಿತವನ್ನು ಆಧರಿಸಿ ಇರುತ್ತದೆಯೇ ಹೊರತು ಕೇಂದ್ರದ ಆಡಳಿತವನ್ನು ಅಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾದ ಹಿನ್ನಲೆಯಲ್ಲಿ ಅವರು ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಇಂದು ಪ್ರಕಟಗೊಂಡಿರುವ ಪಂಚರಾಜ್ಯಗಳ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಆಡಳಿತದ ಪ್ರತಿಫಲನವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಮಹಾಮೈತ್ರಿ ಮಹಾಪತನಗೊಂಡಿದೆ ಎಂದು ಉಲ್ಲೇಖ ಮಾಡಿರುವ ಅವರು, ವಿಜೇತರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.